ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ಸಲ್ಲಿಕೆ ಮಾಡಿತು.
ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಕೆ ಮಾಡಿದ್ದೇವೆ. ಮತದಾರರ ಪಟ್ಟಿಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಚಿಲುಮೆ ಸಂಸ್ಥೆ ತಪ್ಪು ಮಾಡಿದ್ದರೆ, ಅಧಿಕಾರಿಗಳು ಶಾಮೀಲಾಗಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಇನ್ನು ಚಿಲುಮೆ ಸಂಸ್ಥೆಗೆ ಬಿಜೆಪಿ ಶಾಸಕರು ಹಣ ಕೊಟ್ಟಿದ್ದಾರೆ ಎನ್ನುವ ಮಾಹಿತಿ ನನಗೆ ಇಲ್ಲ. ಹಾಗೆ ಕೊಟ್ಟಿದ್ದರೆ, ಯಾಕೆ ಕೊಟ್ಟಿದ್ದಾರೆ ಎಂದು ಆಯೋಗ ತನಿಖೆ ಮಾಡಲು ಎಂದು ಹೇಳಿದರು.










