ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆ…

59
firstsuddi

ಬೆಂಗಳೂರು : ರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ತುಂತುರು ಮಳೆಯಾಗಿದೆ. ಇದರಿಂದ ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟಾಯಿತು. ವಾಹನ ಸವಾರರು ಪರದಾಡುವಂತಾಯಿತು. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವುದರಿಂದ ಇಂದಿನಿಂದ ಶನಿವಾರದವರೆಗೆ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುನ್ಸೂಚನೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವ ಸಂಭವವಿದೆ.