ಸಮಂತಾ ನಟನೆಯ ‘ಯಶೋದಾ’ ಚಿತ್ರಕ್ಕೆ ಕೋರ್ಟ್ ನಿಂದ ತಡೆಯಾಜ್ಞೆ…

46
firstsuddi

ಸಮಂತಾ ನಟನೆಯ ‘ಯಶೋದಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.  ಬಾಕ್ಸ್ ಆಫೀಸಿನಲ್ಲೂ ಚಿತ್ರ ಸದ್ದು ಮಾಡುತ್ತಿದೆ. ಅನಾರೋಗ್ಯದ ನಡುವೆಯೂ ಸಮಂತಾ ಈ ಸಿನಿಮಾಗೆ ಡಬ್ಬಿಂಗ್ ಮಾಡಿದ್ದರು. ಈ ಮಧ್ಯೆ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.

ಈ ಸಿನಿಮಾದಲ್ಲಿ ಸಮಂತಾ ಬಾಡಿಗೆ ತಾಯಿ ಪಾತ್ರ ಮಾಡಿದ್ದಾರೆ. ಆದರೆ ಈ ಸಿನಿಮಾದಲ್ಲಿ ಇವಾ ಆಸ್ಪತ್ರೆಯನ್ನು ಕೆಟ್ಟ ರೀತಿಯಲ್ಲಿ ತೋರಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕೆ ಆಸ್ಪತ್ರೆಯ ಮ್ಯಾನೇಜ್ ಮೆಂಟ್ ಆಸ್ಪತ್ರೆಯನ್ನು ಕೆಟ್ಟ ರೀತಿಯಲ್ಲಿ ತೋರಿಸಿದ್ದರಿಂದ ತಮ್ಮ ಆಸ್ಪತ್ರೆಯ ಮೇಲೆ ಅದು ಪರಿಣಾಮ ಬೀರುತ್ತದೆ ಎಂದು ಕೋರ್ಟ್ ಮೆಟ್ಟಿಲೇರಿದೆ.

ಇವಾ ಮಾತುಗಳನ್ನು ಆಲಿಸಿರುವ ಕೋರ್ಟ್ ಕೂಡ ಆಸ್ಪತ್ರೆಯ ಪರವಾಗಿಯೇ ಆದೇಶ ನೀಡಿದೆ. ಒಟಿಟಿಯಲ್ಲಿ ಈ ಸಿನಿಮಾವನ್ನು ಪ್ರದರ್ಶನ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯ ಒಟಿಟಿ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.