ಬೆಂಗಳೂರು : ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇಂದು ಬೆಂಗಳೂರಿನ ಹೊರವಲಯದ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಸಭೆಯ ಆರಂಭದಲ್ಲೇ ವಾಂತಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ರೀಶೈಲಪ್ಪ ನಿಧನ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ರದ್ದುಗೊಳಿಸಲಾಗಿದೆ.
ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಶ್ರೀಶೈಲಪ್ಪ ಬಿದರೂರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಶ್ರೀಶೈಲಪ್ಪ ಬಿದರೂರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಾಗಿದ್ದರು.










