ಪುಣೆ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರದಲ್ಲಿ ಮರಾಠಿ ಭಾಷಿಕರ ಪುಂಡಾಟಿಕೆ ಮತ್ತೆ ಆರಂಭವಾಗಿದ್ದು, ಕರ್ನಾಟಕ ಬಸ್ ಗೆ ಕಪ್ಪು ಮಸಿ ಬಳಿಯಲಾಗಿದೆ.
ನಿಪ್ಪಾಣಿ – ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್ ಆರ್ ಟಿಸಿ ಬಸ್ ಗೆ ಮಸಿ ಬಳಿಯಲಾಗಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮ ಬಳಿ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿಯಲಾಗಿದೆ.
ಮಹಾರಾಷ್ಟ್ರದ ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಮಹಾರಾಷ್ಟ್ರ ನಮ್ಮ ಹಕ್ಕು ಯಾರಪ್ಪನದಲ್ಲ ಎಂದು ಘೋಷಣೆ ಕೂಗಿದ್ದಾರೆ. ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದರು.










