ಖಾಸಗಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ…

62
firstsuddi

ಬೆಳಗಾವಿ : ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂಬತ್ತು ಜನರಿಗೆ ಗಾಯಗಳಾಗಿರುವ ಘಟನೆ ಖಾನಾಪೂರ ತಾಲೂಕಿನ ಓಲಮನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ. ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಸದ್ಯ ಅಪಘಾತದಲ್ಲಿ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ ಗೋವಾ ರಾಜ್ಯದ ಮಡಗಾಂವ್ ನಿಂದ ಬೈಲೂರು ಗ್ರಾಮಕ್ಕೆ ಹೋಗುತ್ತಿತ್ತು. ಬಸ್ ನಲ್ಲಿದ್ದವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.