ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಜೀಪಿನಿಂದ ಬಿದ್ದು ಆರೋಪಿ ಸಾವು…

70
firstsuddi

ಚಾಮರಾಜನಗರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಪೊಲೀಸ್ ಜೀಪಿನಿಂದ ಬಿದ್ದು ಆರೋಪಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಮೃತ ಆರೋಪಿ.

ಆರೋಪಿ ನಿಂಗರಾಜುನನ್ನು ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದಲ್ಲಿ ಪೋಲಿಸರು ಬಂಧಿಸಿದ್ದರು. ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರುತ್ತಿದ್ದಾಗ ಜೀಪ್ ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಗಂಭೀರ ಗಾಯಗಳಾಗಿದ್ದರಿಂದ ನಿಂಗರಾಜುನನ್ನು ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.