ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಮಾಡಿದ್ದು ನಾನೇ. ಆ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಪಾಲಿಗ್ರಾಫ್ ಪರೀಕ್ಷೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಆರು ಸೆಷನ್ಸ್ ಗಳ ನಂತರ, ಸುಳ್ಳು ಪತ್ತೆ ಪರೀಕ್ಷೆಯು ಅಂತಿಮವಾಗಿ ಇಂದು ಕೊನೆಗೊಂಡಿತು ಎಂದು ಎಫ್ಎಸ್ಎಲ್ ಮೂಲಗಳು ತಿಳಿಸಿವೆ.
ಅಫ್ತಾಬ್ ಪೂನವಾಲಾ ವಿಚಾರಣೆ ವೇಳೆ ಪೊಲೀಸರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆ ಕೋರ್ಟ್ ಅನುಮತಿ ಮೇರೆಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಲಾಗಿತ್ತು. ವಿಚಾರಣೆಯ ಸಮಯದಲ್ಲಿ ಅಫ್ತಾಬ್, ಶ್ರದ್ಧಾಳ ಕತ್ತು ಹಿಸುಕಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, 3 ವಾರಗಳ ಕಾಲ ಫ್ರಿಡ್ಜ್ ನಲ್ಲಿ ಇರಿಸಿ ಬಳಿಕ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಕಾಡಿನಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ಹಲವಾರು ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.










