ಬೆಂಗಳೂರು : ವಕ್ಫ್ ಮಂಡಳಿಯು ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ತೆರೆಯುವ ಕುರಿತು ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ. ನನ್ನೊಂದಿಗೆಯಾಗಲೀ, ನಮ್ಮ ಸರ್ಕಾರದ ಯಾವುದೇ ಹಂತದಲ್ಲಿಯಾಗಲೀ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ವಕ್ಫ್ ಮಂಡಳಿಯ ಅಧ್ಯಕ್ಷರು ಏನು ಹೇಳಿದ್ದಾರೆ ಎಂಬ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದು ಅವರ ವೈಯಕ್ತಿಕ ದೃಷ್ಟಿಕೋನ ಅಥವಾ ನಿಲುವು ಇರಬಹುದು. ಇದು ನಮ್ಮ ಸರ್ಕಾರದ ನಿಲುವು ಅಲ್ಲ. ಅಂತಹ ಯಾವುದೇ ಪ್ರಸ್ತಾವನೆ ಇದ್ದರೂ ವಕ್ಫ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನೊಂದಿಗೆ ಚರ್ಚೆ ಮಾಡಲಿ ಎಂದು ಹೇಳಿದ್ದಾರೆ.
ನಾವು ಯಾವುದೇ ರೌಡಿಗಳನ್ನೂ ಪ್ರೋತ್ಸಾಹ ಮಾಡಲ್ಲ. ಅವರಿಗೆ ಯಾವುದೇ ಅವಕಾಶಗಳನ್ನೂ ಕೊಡುವುದಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗಲ್ಲ. ಇದು ಬಹಳ ಸ್ಪಷ್ಟವಾಗಿದ್ದು, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.










