ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧ – ಮದ್ರಾಸ್ ಹೈಕೋರ್ಟ್.

65
firstsuddi

ಚೆನ್ನೈ : ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ತಿಳಿಸಿದೆ.

ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.

ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್ ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.