ಅಮಿತ್ ಶಾ ಭೇಟಿಯಾದ ಮಹಾರಾಷ್ಟ್ರ ಸಂಸದರು.

55
firstsuddi

ನವದೆಹಲಿ : ಮಹಾರಾಷ್ಟ್ರ ಸಂಸದರ ನಿಯೋಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನ ಭೇಟಿಯಾಗಿ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಿದೆ.

ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೇತೃತ್ವದಲ್ಲಿ ಸಂಸದರು ಭೇಟಿಯಾಗಿ ಗಡಿಯಲ್ಲಿ ಮರಾಠಿಗರ ಮೇಲೆ ಕರ್ನಾಟಕದಲ್ಲಿ ಹಲ್ಲೆಯಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಸಂಸದೆ ಸುಪ್ರಿಯಾ ಸುಳೆ ಮಾತನಾಡಿ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದಾಗಿ ಅಮಿತ್ ಶಾ ಹೇಳಿದ್ದಾರೆ. ಗಡಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ. ಸರ್ವಪಕ್ಷ ಸಭೆ ಕರೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

ಲೋಕಸಭೆಯಲ್ಲಿ ಬೆಳಗಾವಿ ಗಡಿ ವಿವಾದ ಪ್ರಸ್ತಾಪಿಸಿದ ಮಹಾರಾಷ್ಟ್ರ ಸಂಸದ ಧರೀಯಶೀಲ್ ಮಾನೆ, ದೇಶದಲ್ಲಿ ಎಲ್ಲರೂ ಒಂದೇ ಎಂದು ಭಾವಿಸಲಾಗಿದೆ. ಆದರೆ ಗಡಿ ಭಾಗಗಳಲ್ಲಿ ಶಾಂತಿ ಕದಡುವ ಸ್ಥಿತಿ ಇದೆ. ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕನ್ನಡ ಸಂಘಟನೆಗಳು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿವೆ. ಮರಾಠಿಗರು ಆತಂಕದಿಂದ ಜೀವನ ನಡೆಸುವಂತಾಗಿದೆ. ಕರ್ನಾಟಕ ಮುಖ್ಯಮಂತ್ರಿಗಳು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಆಗ ಮಾತ್ರ ಅಲ್ಲಿನ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯ. ಎರಡು ರಾಜ್ಯದ ಸಿಎಂಗಳನ್ನು ಒಟ್ಟುಗೂಡಿಸಿ ಸಮಸ್ಯೆ ಬಗೆಹರಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದಾರೆ.