ಕಾರ್ಕಳ: ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಬಳಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40) ಪ್ರತ್ಯುಷಾ (32) 2 ವರ್ಷದ ಮಗು ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಮೃತರು ತಮ್ಮ ಕಾರಿನಲ್ಲಿ ಧರ್ಮಸ್ಥಳದ ದೇವಸ್ಥಾನ ಭೇಟಿ ಮುಗಿಸಿ ಶೃಂಗೇರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










