ಪೊಲೀಸ್ ಠಾಣೆಯ ಮೇಲೆ ರಾಕೆಟ್ ಗ್ರೆನೇಡ್ ದಾಳಿ…

59
firstsuddi

ಅಮೃತಸರ: ಪಂಜಾಬ್ ನ ತರ್ನ್ ತರನ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ನಿನ್ನೆ ಮಧ್ಯರಾತ್ರಿ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದೆ.

ತರ್ನ್ ತರನ್ ಜಿಲ್ಲೆಯ ಅಮೃತಸರ-ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆ ಮೇಲೆ ರಾಕೆಟ್ ಚಾಲಿತ ಗ್ರೆನೇಡ್(ಆರ್‌ಪಿಜಿ) ಅನ್ನು ಎಸೆಯಲಾಗಿದ್ದು, ಅದು ಸಿಡಿದಿದೆ. ಈ ದಾಳಿಯ ಹಿಂದೆ ಪಾಕಿಸ್ತಾನಿ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗ್ರೆನೇಡ್ ಸಿಡಿದು ಪೊಲೀಸ್ ಠಾಣೆಯ ಮುಖ್ಯ ದ್ವಾರದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೂ ಮುನ್ನ ಮೇ 9ರಂದು ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿ ಮೇಲೆ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್ (ಆರ್‌ಪಿಜಿ) ಬಳಸಿ ದಾಳಿ ನಡೆಸಲಾಗಿತ್ತು.