ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ…

66
firstsuddi

ಶಿಮ್ಲಾ : ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ರಚನೆ ಕಸರತ್ತು ನಡೆಸುತ್ತಿದ್ದು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅನುಮೋದಿಸಿದೆ.

ಹಿಮಾಚಲದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂಬ ನಿರೀಕ್ಷೆ ಹುಟ್ಟಿಕೊಂಡಿತ್ತು. ಆದರೆ ಇದೀಗ ಸುಖ್ವಿಂದರ್ ಸಿಂಗ್ ಸುಖು ಅವರನ್ನೇ ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಸುಖ್ವಿಂದರ್ ಸಿಂಗ್ ಸುಖು ಅವರು ನಾಳೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.