14ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರ ಬಂಧನ…

61
firstsuddi

ಹಾಸನ : 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಅಪ್ರಾಪ್ತೆ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕೆಲಸಕ್ಕೆಂದು ಪೋಷಕರ ಜೊತೆ ಬಂದಿದ್ದ ಬಾಲಕಿ ಮೇಲೆ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಬಾಲಕಿ ಆಸ್ಪತ್ರೆಗೆ ಹೋಗಿದ್ದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಸದ್ಯ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಆಶ್ರಯದಲ್ಲಿರಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.