ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಇಂದು ಸಂಜೆ 7 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸೇರಿ ಹಿರಿಯ ಸಚಿವರು ಭಾಗಿಯಾಗಲಿದ್ದಾರೆ.
ಇತ್ತೀಚಿಗೆ ಮಹಾವಿಕಾಸ ಅಘಾಡಿ ಸಂಸದರು ಅಮಿತ್ ಶಾರನ್ನು ಭೇಟಿಯಾಗಿ ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಸ್ತಿಕೆ ವಹಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಅಮಿತ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಸಭೆ ನಡೆಯಲಿದೆ. ಸಭೆಯಲ್ಲಿ ಎರಡು ರಾಜ್ಯಗಳ ಸಿಎಂಗಳಿಗೆ ಗೃಹ ಸಚಿವರು ನೀಡುವ ಸೂಚನೆ ಬಗ್ಗೆ ಕುತೂಹಲ ಹೆಚ್ಚಾಗಿದೆ.










