ತುಮಕೂರು : ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ, ತಾಯಿ, ಮಗ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿಕ್ರಾಸ್ ನಲ್ಲಿ ನಡೆದಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ನಡುವಿನಹಳ್ಳಿಯ ರಾಮಣ್ಣ (58), ನಾರಾಯಣಪ್ಪ (54), ಸಾಗರ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ನಾಗರತ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಮತ್ತು ಕ್ಯಾಂಟರ್ ನಡುವೆ ನಡೆದ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರು ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










