ಬೆಂಗಳೂರು : ಬಿಎಂಟಿಸಿ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಆರೋಗ್ಯ ರಕ್ಷಾ ಯೋಜನೆಯಡಿ ಬಿಎಂಟಿಸಿ 35 ಸಾವಿರ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡುವುದಾಗಿ ಇಂದು ಘೋಷಿಸಿದ್ದಾರೆ. ಈ ಯೋಜನೆಯಡಿ ಬಿಎಂಟಿಸಿ ನೌಕರರು ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಆಯುಷ್ಮಾನ್ ಯೋಜನೆಯಡಿಯಲ್ಲಿ ಸಾಸ್ತಾ ಎಂಬ ಯೋಜನೆ ಜಾರಿಗೆ ತರಲು ಸಾರಿಗೆ ನಿಗಮ ಮುಂದಾಗಿದೆ. ನಿಗಮದ ಸಿಬ್ಬಂದಿಗಳು ಹಾಗೂ ಕುಟುಂಬದವರು ಯಾವುದೇ ಅನಾರೋಗ್ಯಕ್ಕೊಳಗಾದ್ರೆ ಈ ಯೋಜನೆಯಡಿ ಅವರು ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈ ಸಂಬಂಧ ಆರೋಗ್ಯ ಸಚಿವರು ಹಾಗೂ ಇಲಾಖೆ ಜೊತೆ ಈಗಾಗಲೇ ಬಿಎಂಟಿಸಿ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.










