ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ವಿದ್ಯಾರ್ಥಿಗಳಿಗೆ ಗಾಯ…

74
firstsuddi

ಶಿವಮೊಗ್ಗ : ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ 18 ಜನ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿ ಇಂದು ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.