ಮಲೇಷ್ಯಾದಲ್ಲಿ ಭೂಕುಸಿತ – 8 ಮಂದಿ ಸಾವು, 50ಕ್ಕೂ ಹೆಚ್ಚು ಜನ ನಾಪತ್ತೆ…

62
firstsuddi

ಕೌಲಾಲಂಪುರ್: ಮಲೇಷ್ಯಾದ ರಾಜಧಾನಿ ಕೌಲಾಲಂಪುರ್ ನ ಕ್ಯಾಂಪಿಂಗ್ ಪ್ರದೇಶವಾಗಿರುವ ಸೆಲಂಗೋರ್ ನಲ್ಲಿ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಂಪ್ ಪ್ರದೇಶದ 30 ಮೀಟರ್ ಎತ್ತರದಿಂದ ಭೂಕುಸಿತ ಸಂಭವಿಸಿದ್ದು, ಒಂದು ಎಕರೆಯಷ್ಟು ಪ್ರದೇಶದಲ್ಲಿ ಮಣ್ಣು ಆವರಿಸಿದೆ. 79ಕ್ಕೂ ಅಧಿಕ ಮಂದಿ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ಸಿಲುಕಿಕೊಂಡಿದ್ದರು. ಈವರೆಗೆ 23ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.

ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ.