ದಾವಣಗೆರೆ : ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ ಸಂಬಂಧ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸೌಭಾಗ್ಯ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಪತ್ನಿ ಹಾಗೂ ಮಾಜಿ ಜಿ.ಪಂ ಅಧ್ಯಕ್ಷೆಯಾಗಿದ್ದಾರೆ. ನಿನ್ನೆ ರಾತ್ರಿ ಸೌಭಾಗ್ಯರನ್ನು ವಶಕ್ಕೆ ಪಡೆದು ದಾವಣಗೆರೆಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು ಬೆಳಗ್ಗೆ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿದೆ.
ಬಸವರಾಜನ್ ಹಾಗೂ ಸೌಭಾಗ್ಯ ಬಸವರಾಜನ್ ದಂಪತಿ ವಿರುದ್ಧ ನವೆಂಬರ್ 9 ರಂದು ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಆರೋಪ ಸಂಬಂಧ ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ಅವರು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ನವೆಂಬರ್ 10ರಂದು ಮಠದ ಶಿಕ್ಷಕ ಬಸವರಾಜೇಂದ್ರನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದರು. ನಂತರ ನವೆಂಬರ್ 10ರಂದು ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಬಂಧನವಾಗಿತ್ತು. ಇತ್ತ ಈವರೆಗೂ ಸೌಭಾಗ್ಯ ಬಸವರಾಜನ್ ನಾಪತ್ತೆಯಾಗಿದ್ದರು. ಇದೀಗ ದಾವಣಗೆರೆಯಲ್ಲಿ ಪೋಲಿಸ್ ಬಂಧಿಸಿದ್ದಾರೆ.










