ಬೆಂಗಳೂರು : ಅಟ್ಟಿಕಾ ಗೋಲ್ಡ್ ಮಾಲೀಕರಾದ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬುರನ್ನು ಬಂಧಿಸಿದ್ದಾರೆ.
ಅನಂತಪುರ ಬಳಿಯ ಯಲ್ಲೂರಿನ ಶೇಕ್ ಮೀನಾಜ್ ಎಂಬ ಮಹಿಳೆ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು ತನ್ನನ್ನು ಮದುವೆಯಾಗಿ ಮೋಸ ಮಾಡಿದ್ದಾರೆ. ಡಿಸೆಂಬರ್ 12ರಂದು ಯಲ್ಲೂರಿಗೆ ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಮನೆಯಲ್ಲಿ ಇದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಕೊಲೆಗೆ ಯತ್ನ ಮಾಡಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ.
ಈ ದೂರಿನ ಅನ್ವಯ ಪೊಲೀಸರು IPC section 448, 342, 307, 386, 427, 498A, 506 ಮತ್ತು ವರದಕ್ಷಿಣೆ ಕಿರುಕುಳ ಆರೋಪದಡಿ ಕೇಸ್ ದಾಖಲಾಗಿದೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಬೆಂಗಳೂರಿಗೆ ಆಗಮಿಸಿ ಸ್ಥಳೀಯ ಪೊಲೀಸರ ಸಹಾಯದಿಂದ ಅಟ್ಟಿಕಾ ಬಾಬು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕದ್ದ ಬಂಗಾರ ಖರೀದಿ ಮಾಡಿದ್ದ ಆರೋಪದಲ್ಲೂ ಹಲವಾರು ಬಾರಿ ಅಟ್ಟಿಕಾ ಬಾಬು ಅರೆಸ್ಟ್ ಆಗಿದ್ದಾರೆ.










