ವಿದ್ಯಾರ್ಥಿಗಳಿಂದ ಉರ್ದು ಪ್ರಾರ್ಥನೆ – ಸರ್ಕಾರಿ ಶಾಲೆಯ ಪ್ರಾಂಶುಪಾಲ ಅಮಾನತು…

58
firstsuddi

ಲಕ್ನೋ : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದ ಉರ್ದು ಪ್ರಾರ್ಥನೆಯನ್ನು ಹಾಡಿಸಿದ್ದಕ್ಕೆ ಶಿಕ್ಷಣ ಇಲಾಖೆ ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ.

ವರದಿಗಳ ಪ್ರಕಾರ ಶಾಲಾ ಮಕ್ಕಳಿಗೆ ಬೆಳಗ್ಗೆ ಪ್ರಾರ್ಥನೆ ವೇಳೆ ಜನಪ್ರಿಯ ಉರ್ದು ಭಾಷೆಯ ಗೀತೆ ‘ಲಬ್ ಪೆ ಆತಿ ಹೆ ದುವಾ ಬನ್ಕೆ ತಮನ್ನಾ ಮೇರಿ’ ಹಾಡನ್ನು ಹಾಡಿಸಲಾಗಿದೆ. ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿಕ್ಷಣ ಇಲಾಖೆ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಂಡಿದೆ.

ಪೊಲೀಸರು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರೂ ಯಾರನ್ನೂ ಬಂಧಿಸಿಲ್ಲ. ಆದರೆ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲನನ್ನು ಅಮಾನತುಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳಿಂದ ಹಾಡಿಸಲಾದ ಪ್ರಾರ್ಥನೆ ಸರ್ಕಾರಿ ಶಾಲೆಗಳ ದೈನಂದಿನ ಪ್ರಾರ್ಥನಾ ವೇಳಾಪಟ್ಟಿಯಲ್ಲಿ ಇಲ್ಲ. ಬದಲಿಗೆ ಅದು ಒಂದು ಧರ್ಮಕ್ಕೆ ಸಂಬಂಧಿಸಿರುವುದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.