ಸೈಕ್ಲೋನ್ ಎಫೆಕ್ಟ್ – ಬೆಂಗಳೂರಿನಲ್ಲಿ ಮತ್ತೆ ಮಳೆ ಶುರು…

51
firstsuddi

ಬೆಂಗಳೂರು : ಸೈಕ್ಲೋನ್ ಎಫೆಕ್ಟ್ ನಿಂದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವದಿಂದಲೇ ಮಳೆ ಶುರುವಾಗಿದೆ. 

ಬೆಳ್ಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ನಿನ್ನೆಯಿಂದ ನಗರದ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಮಳೆ ಜೊತೆಗೆ ಚಳಿನೂ ಇದ್ದು, ಬೆಳಗ್ಗೆದ್ದು ಕೆಲಸಕ್ಕೆ ಹೋಗುವವರೊಗೆ ಕೊಂಚ ಕಿರಿಕಿರಿ ಉಂಟು ಮಾಡಿದೆ.

ನೈಋತ್ಯ ಬಂಗಾಳಕೊಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆಯಿದೆ. ಬಳಿಕ 2 ದಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.