ಚೀನಾದಿಂದ ಭಾರತಕ್ಕೆ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ…

63
firstsuddi

ನವದೆಹಲಿ : ಚೀನಾದಿಂದ ಭಾರತಕ್ಕೆ ಹಿಂತಿರುಗಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ವ್ಯಕ್ತಿಯಲ್ಲಿ ಬಿಎಫ್.7 ರೂಪಾಂತರಿ ಇರುವ ಭೀತಿಯಿದೆ.

ಶಹಗಂಜ್ ಪ್ರದೇಶದ ವ್ಯಕ್ತಿ ಡಿಸೆಂಬರ್ 23ರಂದು ಚೀನಾದಿಂದ ಆಗ್ರಾಗೆ ಮರಳಿದ್ದರು. ಬಳಿಕ ಅವರು ಖಾಸಗಿ ಪ್ರಯೋಗಾಲಯದಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ನಿನ್ನೆ ವ್ಯಕ್ತಿಯ ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದ್ದು, ಇದೀಗ ಅವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಹೆಚ್ಚಿನ ತಪಾಸಣೆಗಾಗಿ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ರವಾನಿಸಲಾಗಿದೆ.

ಸೋಂಕಿತ ವ್ಯಕ್ತಿಯ ಮನೆಯನ್ನು ಸೀಲ್ ಮಾಡಲಾಗಿದೆ. ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಸೋಂಕಿತ ವ್ಯಕ್ತಿಯನ್ನು ವೈದ್ಯಾಧಿಕಾರಿಗಳು ಚಿಕಿತ್ಸೆ ಹಾಗೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಚೀನಾದಲ್ಲಿ ಈ ತಿಂಗಳು ತೀವ್ರವಾಗಿ ಕೋವಿಡ್ ಪ್ರಕರಣಗಳ ಏರಿಕೆ ಕಾಣುತ್ತಿರುವುದರಿಂದ ಭಾರತ ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲು ಈಗಾಗಲೇ ಪ್ರಾರಂಭಿಸಿದೆ.