ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್)ಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಏಮ್ಸ್ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ. ನಿರ್ಮಲಾ ಸೀತಾರಾಮನ್ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.










