ವಿದೇಶದಿಂದ ಬೆಂಗಳೂರಿಗೆ ಬಂದ 12 ಮಂದಿಗೆ ಕೋವಿಡ್ ಪಾಸಿಟಿವ್…

55
firstsuddi

ಬೆಂಗಳೂರು : ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 12 ಕೊರೊನಾ ಸೋಂಕು ದೃಢಪಟ್ಟಿದೆ.

ಹಾಂಕಾಂಗ್, ಅಮೇರಿಕ, ಥಾಯ್ಲೆಂಡ್, ಆಸ್ಟ್ರೇಲಿಯಾ, ಸಿಂಗಾಪುರದಿಂದ ಬಂದ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿದೆ. ಒಟ್ಟು ನಾಲ್ಕು ಜನ ಅಂತಾರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇನ್ನುಳಿದವರು ಹೋಂ ಐಸೋಲೇಷನ್ ನಲ್ಲಿದ್ದಾರೆ.

ಸೋಂಕಿತರಿಗೆ ಬಂದಿರುವ ತಳಿ ಯಾವುದು ಎಂದು ತಿಳಿಯಲು ಗಂಟಲು ದ್ರವದ ಮಾದರಿಯನ್ನು ಜೀನೋಮ್ ಸೀಕ್ವೆನ್ಸ್ ಲ್ಯಾಬ್ ಗೆ ಕಳುಹಿಸಲಾಗಿದೆ. ಸದ್ಯ ಎಲ್ಲಾ ಸೋಂಕಿತರ ಜೀನೋಮ್ ಸೀಕ್ವೆನ್ಸ್ ವರದಿಗೆ ಆರೋಗ್ಯ ಇಲಾಖೆ ಕಾಯುತ್ತಿದೆ.