ಕೊರಿಯರ್ ಮೂಲಕ ಬಂದಿದ್ದ ಮಿಕ್ಸಿ ಬ್ಲಾಸ್ಟ್ ; ಮಾಲೀಕನ ಸ್ಥಿತಿ ಗಂಭೀರ…

55
firstsuddi

ಹಾಸನ : ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ಅನುಮಾನಾಸ್ಪದವಾಗಿ ಸ್ಫೋಟಗೊಂಡಿರುವ ಘಟನೆ ನಿನ್ನೆ ಸಂಜೆ 7.30ಕ್ಕೆ ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ನಡೆದಿದೆ.

ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್ ಟೆಸ್ಟ್ ಮಾಡುತ್ತಿರುವಾಗ ಸ್ಫೋಟಗೊಂಡಿದೆ. ಕೊರಿಯರ್ ಮಾಲೀಕ ಶಶಿಗೆ ಗಂಭೀರ ಗಾಯಗಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಸ್ಫೋಟದಿಂದಾಗಿ ಅಂಗಡಿಯ ಗ್ಲಾಸ್, ಗೋಡೆಗೂ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಬೆನ್ನಲ್ಲೇ ಈ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.