ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಕಿತ್ತಾಟ…

57
firstsuddi

ಹುಬ್ಬಳ್ಳಿ : ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಕಿತ್ತಾಟ ನಡೆದಿದೆ.

ಅಭ್ಯರ್ಥಿಗಳ ಆಯ್ಕೆ ಕುರಿತು ನಗರದ ಕಾರವಾರ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ ಸಂಜೆ ಸಭೆ ನಡೆಸಲಾಯಿತು. ಕಾಂಗ್ರೆಸ್ ನ ಹಿರಿಯ ಮುಖಂಡರು ಸಂದರ್ಶನದ ರೀತಿಯಲ್ಲಿ ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಟಿಕೆಟ್ ಆಕಾಂಕ್ಷಿಗಳಾದ ರಜತ್ ಉಳ್ಳಾಗಡ್ಡಿಮಠ ಮತ್ತು ಅನಿಲಕುಮಾರ್ ಪಾಟೀಲ್ ಅವರು ಕೆಪಿಸಿಸಿಗೆ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದು, ಸಭೆಯಲ್ಲಿ ಬೆಂಬಲಿಗ ಕಾರ್ಯಕರ್ತರ ದಂಡೇ ಆಗಮಿಸಿತ್ತು. ಇದೇ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದ ರಜತ್ ಉಳ್ಳಾಗಡ್ಡಿಮಠ, ಅನಿಲಕುಮಾರ್ ಪಾಟೀಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಪಕ್ಷದ ವೀಕ್ಷಕರ ಎದುರು ರಜತ್ಗೆ ಟಿಕೆಟ್ ನೀಡಬೇಕೆಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಅನಿಲಕುಮಾರ್ ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕೆಂದು ಜಯಘೋಷ ಹಾಕಿದರು. ಈ ವೇಳೆ ಪಕ್ಷದ ಹಿರಿಯ ಮುಖಂಡರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಯಶಸ್ವಿಯಾದರು.