ಬೆಳಗಾವಿ ಗಡಿ ವಿವಾದದ ಬಗ್ಗೆ ನಿಲುವಳಿ ಸೂಚನೆ ಮಂಡಿಸಿದ ಏಕನಾಥ್ ಶಿಂಧೆ.

62
firstsuddi

ಮುಂಬೈ : ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಇರುವ ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲಾಯಿತು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಡಿಸಿದ ನಿಲುವಳಿ ಸೂಚನೆಯನ್ನು ಸರ್ವಪಕ್ಷಗಳು ಅವಿರೋಧವಾಗಿ ಒಪ್ಪಿಗೆ ನೀಡಿವೆ. ಈಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಗಿನ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಯಥವತ್ತಾಗಿ ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಬೇಕು. ಮತ್ತು ಗಡಿ ಭಾಗದ ಮರಾಠಿ ಜನರ ಸುರಕ್ಷತೆಗೆ ಸರ್ಕಾರಕ್ಕೆ ತಿಳುವಳಿಕೆ ನೀಡಬೇಕು ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದರು.

ಮಹಾರಾಷ್ಟ್ರ ಸೃಷ್ಟಿಸಿರುವ ಗಡಿ ವಿವಾದವನ್ನು ಕರ್ನಾಟಕ ಗುರುವಾರ ಖಂಡಿಸಿತ್ತು. ಕರ್ನಾಟಕದ ಭೂಮಿ, ನೀರು, ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.ಕರ್ನಾಟಕದ ಜನತೆ ಮತ್ತು ಸದಸ್ಯರ (ವಿಧಾನಸಭಾ) ಭಾವನೆಗಳು ಕೂಡಾ ಇದೇ ಆಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವೆಲ್ಲರೂ ಒಗ್ಗಟ್ಟಿನಿಂದ ಸಾಂವಿಧಾನಿಕ ಮತ್ತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಕರ್ನಾಟಕ ಹೇಳಿದೆ.

ಮಹಾರಾಷ್ಟ್ರದವರು ಅನಗತ್ಯವಾಗಿ ಸೃಷ್ಟಿಸಿರುವ ಗಡಿ ವಿವಾದಗಳನ್ನು ಖಂಡಿಸಿ ಈ ಸದನವು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಮಂಡಿಸಿದ ನಿರ್ಣಯದಲ್ಲಿ ಹೇಳಲಾಗಿದೆ.