ಬಾರ್, ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು : ಆರ್.ಅಶೋಕ್

42
firstsuddi

ಬೆಳಗಾವಿ : ಬಾರ್ ಹಾಗೂ ಪಬ್‌ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರ ವಿರೋಧದ ಕುರಿತು ಮಾತನಾಡಿದ ಸಚಿವರು, ಬಾರ್, ಪಬ್ ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ. ಬರುವ ಗ್ರಾಹಕರಿಗೆ ಆ ಮಾಸ್ಕ್ ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದರು.

ಜನರ ಪ್ರಾಣಕ್ಕೆ ಕಂಟಕ ಬಂದ್ರೆ ಏನು ಸಿಗುತ್ತದೆ? ನಿಮಗ್ಯಾರಿಗೋ ಬಾರ್ ವ್ಯಾಪಾರ ಆಗಬೇಕು ಅಂತಾ ಜನರ ಪ್ರಾಣ ತೆಗೆಯೋದು ಒಳ್ಳೆಯದಲ್ಲ. ನಾನು ಅವರಲ್ಲಿ ವಿನಂತಿ ಮಾಡ್ತೀನಿ, ದಯಮಾಡಿ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಕೋವಿಡ್ ಯೂನಿಟ್ಸ್, ಆಕ್ಸಿಜನ್ ಪ್ಲಾಂಟ್, ಐಸಿಯು ಘಟಕ ಸೇರಿದಂತೆ ಎಲ್ಲ ಸೌಲಭ್ಯಗಳ ಪರಿಶೀಲನೆ ನಡೆಸಲಾಗಿದೆ. ಅಂತೆಯೇ ರಾಜ್ಯದ ಎಲ್ಲೆಡೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದು ಹೇಳಿದರು.