ಉತ್ತರ ಭಾರತದಲ್ಲಿ ದಟ್ಟ ಮಂಜು : ವಿಮಾನಗಳ ಸಂಚಾರಕ್ಕೆ ಅಡ್ಡಿ…

50
firstsuddi

ನವದೆಹಲಿ : ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ ಹಾಗೂ ತೀವ್ರ ಚಳಿ ಹೆಚ್ಚಾಗಿದ್ದು, ಸುಮಾರು 100 ವಿಮಾನಗಳ ಸಂಚಾರಕ್ಕೆ ಅಡಚಣೆಯಾಗಿದೆ.

3 ದಿನಗಳಿಂದ ಉಂಟಾಗುತ್ತಿರುವ ಹವಮಾನ ವೈಪರೀತ್ಯದಿಂದಾಗಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿ ಬಂದಿದೆ. ಕೆಲವು ವಿಮಾನಗಳ ಮಾರ್ಗವನ್ನು ಬದಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರ್ಷಾಂತ್ಯದ ರಜೆ ದಿನಗಳ ಹಿನ್ನೆಲೆಯಲ್ಲಿ ನವದೆಹಲಿ ವಿಮಾನ ನಿಲ್ದಾಣದಲ್ಲಿ ಜನ ದಟ್ಟಣೆ ಉಂಟಾಗಿದೆ. ಆದರೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸಿರುವುದರಿಂದ ವಿಮಾನ ವ್ಯತ್ಯಯ ಉಂಟಾಗಿ ಪ್ರಯಾಣಿಕರಿಗೆ ಅನನುಕೂಲವಾಗಿದೆ.

ದೆಹಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಲಿಮಿಟೆಡ್ ಪ್ರಯಾಣಿಕರಿಗೆ ತಮ್ಮ ವಿಮಾನಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚನೆ ನೀಡಿದೆ.