ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಎನ್ ಸಿಪಿ ನಾಯಕ ಅನಿಲ್ ದೇಶಮುಖ್ ಒಂದು ವರ್ಷದ ನಂತರ ಇಂದು ಮುಂಬೈನ ಅರ್ಥರ್ ರೋಡ್ ಜೈಲಿನಿಂದ ಹೊರಬಂದಿದ್ದಾರೆ.
ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಅನಿಲ್ ದೇಶ್ಮುಖ್ ಬಿಡುಗಡೆಗೆ ಡಿಸೆಂಬರ್ 12ರಂದು ಹೈಕೋರ್ಟ್ ಆದೇಶಿಸಿತ್ತು. ಈ ಆದೇಶಕ್ಕೆ 10 ದಿನಗಳ ಕಾಲ ತಡೆ ಕೋರಿದ ಸಿಬಿಐ, ಸುಪ್ರೀಂ ಕೋರ್ಟ್ಗೆ ಹೋಗಲು ಅವಕಾಶ ನೀಡುವಂತೆ ಮನವಿ ಮಾಡಿತ್ತು. ಆದರೆ ಈ ಅವಧಿ ಮುಕ್ತಾಯವಾಗಿದ್ದು, ಕೋರ್ಟ್ ದೇಶ್ಮುಖ್ ಅವರನ್ನು ಬಿಡುಗಡೆಗೊಳಿಸಿದೆ.










