ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವು…

46
firstsuddi

ಹಾವೇರಿ : ಈಜಲು ತೆರಳಿದ್ದ ಮೂವರು ಯುವಕರು ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಬಳಿ ನಡೆದಿದೆ.

ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತ ದುರ್ದೈವಿಗಳು. ಹೊಸ ವರ್ಷದ ಹಿನ್ನೆಲೆ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಕೂಡ ಮೃತದೇಹಗಳು ಪತ್ತೆಯಾಗಿಲ್ಲ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.