ನವದೆಹಲಿ : ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ವಿಜಯಪುರದ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ಐದು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ನಿನ್ನೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.










