ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ : ಸಿದ್ದರಾಮಯ್ಯ.

46
firstsuddi

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ 10.5 ಲಕ್ಷ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಇದರ ಅರ್ಥ ವಿಧಾನಸೌಧದಲ್ಲೇ ಲಂಚದ ವ್ಯವಹಾರ ನಡಿಯುತ್ತಿದೆ. ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪ ಮಾಡಿದರು.

ವಿಧಾನಸೌಧಕ್ಕೆ ಹಣವನ್ನು ತಂದಿದ್ದ ವ್ಯಕ್ತಿ ಯಾರಿಗೆ ಕೊಡಲು ಬಂದಿದ್ದ? ಪಿಡಬ್ಲ್ಯುಡಿ ಮಿನಿಸ್ಟರ್ ಗೆ ಕೊಡಲು ಬಂದಿರಬೇಕು, ಇಲ್ಲಾ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಅಲ್ವಾ? ಎಂದು ಪ್ರಶ್ನೆ ಮಾಡಿದರು.

ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ಜಗದೀಶ್ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು. ಗೇಟ್ ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಅವರ ಬ್ಯಾಗ್ ನಲ್ಲಿ 10.5 ಲಕ್ಷ ರೂ. ಪತ್ತೆಯಾಗಿತ್ತು. ಅವರ ಬಳಿ ಇಷ್ಟೊಂದು ದೊಡ್ಡ ಮೊತ್ತದ ಹಣದ ಕುರಿತಾಗಿ ಮಾಹಿತಿ ಕೇಳಿದಾಗ ಅವರು ಸರಿಯಾಗಿ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಜಗದೀಶ್ ನನ್ನು ಹಾಗೂ ಹಣವನ್ನು ವಶಕ್ಕೆ ಪಡೆದು ಎಫ್ಐಆರ್ ದಾಖಲಿಸಿದ್ದರು.

ಅವರು ಯಾವ ವಿಚಾರಕ್ಕೆ ಹಣ ತಂದಿದ್ದರು? ಯಾರಿಗೆ ಹಣ ಸಾಗಿಸಲಾಗುತ್ತಿತ್ತು? ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.