ಬೆಂಗಳೂರು : ಚಿಕ್ಕಬಳ್ಳಾಪುರ ಜಿಲ್ಲೆಗೆ ಬಿಎಂಟಿಸಿ ಬಸ್ ಸಂಚಾರವನ್ನು ವಿಸ್ತರಣೆ ಮಾಡಿರುವ ಬೆನ್ನಲ್ಲೇ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನಡುವೆ ಕಿತ್ತಾಟ ಶುರುವಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ಇದೆ. ಆದರೆ ಚಿಕ್ಕಬಳ್ಳಾಪುರಕ್ಕೂ ಸಂಚಾರ ವಿಸ್ತರಿಸಲು ಮುಂದಾಗಿರುವ ಬಿಎಂಟಿಸಿ ನಡೆ ವಿರುದ್ಧ, ಕೆಎಸ್ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿದೆ.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿಮೀ ಮೀಟರ್ ಅಂತರವಿದೆ. ನಿಯಮದ ಪ್ರಕಾರ ಬಸ್ ಸಂಚಾರ ವಿಸ್ತರಣೆ ಮಾಡಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಹೇಳುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಎಂಟಿಸಿ ಸಂಚಾರ ಮಾಡಿದರೆ ಕೆಎಸ್ಆರ್ಟಿಸಿ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಸದ್ಯ ಈ ಸಂಬಂಧ ತಕ್ಷಣ ಸರ್ಕಾರಕ್ಕೆ ಪತ್ರ ಬರೆಯಲು ಕೆಎಸ್ಆರ್ಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ.










