ಬೆಳಗಾವಿಯಲ್ಲಿ ಪ್ರಾಮಿಸ್ ಪಾಲಿಟಿಕ್ಸ್ – ತೆಂಗಿನಕಾಯಿ ಮೇಲೆ ಆಣೆ ಮಾಡಿಸ್ಕೊಂಡು ಮಿಕ್ಸರ್​ ಗ್ರೈಂಡರ್ ಹಂಚಿಕೆ…

56
firstsuddi

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ಜನರಿಗೆ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿ ಮಿಕ್ಸರ್ ಗ್ರೈಂಡರ್ ನೀಡುತ್ತಿರುವ ಆರೋಪ ಕೇಳಿಬಂದಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ಗಂಭೀರ ಆರೋಪ ಮಾಡಿದ್ದು, ಆಣೆ ಪ್ರಮಾಣ ಮಾಡಿಸುವವರನ್ನು ತರಾಟೆಗೆ ತಗೆದುಕೊಳ್ಳುವ ವಿಡಿಯೋವೊಂದನ್ನು ಧನಂಜಯ್ ಜಾಧವ್ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮಹಿಳೆಯರು ಮಿಕ್ಸರ್ ಗ್ರೈಂಡರ್ ಒಯ್ಯುತ್ತಿರುವ ವೀಡಿಯೋ ರಿಲೀಸ್ ಮಾಡಿದ್ದಾರೆ.

ನಿಜವಾದ ಅಭಿವೃದ್ಧಿ ಮಾಡಿದ್ರೆ ಆಣೆ ಪ್ರಮಾಣ ಏಕೆ ಮಾಡಿಸ್ತಿದ್ರಿ? ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚೇಲಾಗಳು ಪ್ರತಿ ಮನೆಗೆ ತೆರಳಿ ಆಣೆ ಮಾಡಿಸುತ್ತಿದ್ದಾರೆ. ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನರು ವಿರೋಧ ಮಾಡುತ್ತಿದ್ದಾರೆ. ನಮಗೆ ವೋಟ್ ಹಾಕಬೇಕು ಅಂತಾ ಆಣೆ ಮಾಡಿಸುತ್ತಿದ್ದಾರೆ. ಈ ರೀತಿಯ ನೀಚ ರಾಜಕಾರಣ ವಿರೋಧ ಮಾಡುತ್ತಿದ್ದೇನೆ. ಇನ್ನೂರು ರೂ. ವಸ್ತು ನೀಡಿ ವೋಟ್ ಹಾಕಬೇಕೆಂದು ಆಣೆ ಮಾಡಿಸುತ್ತಿದ್ದೀರಾ? ಥೂ ಇಂತಹ ರಾಜಕಾರಣ ಮಾಡಬಾರದು ಎಂದು ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.