ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ…

37
firstsuddi

ಬೆಂಗಳೂರು: ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಿಂದ ಪುಸ್ತಕ ಬಿಡುಗಡೆಗೆ ಮುಂದಾಗಿದ್ದ ಆಯೋಜಕರಿಗೆ ಹಿನ್ನಡೆ ಉಂಟಾಗಿದೆ. ಹಾಗೇ ಸಚಿವ ಡಾ.ಅಶ್ವತ್ಥ್ ನಾರಾಯಣ್ ಮತ್ತಿತರರಿಗೆ ಕೋರ್ಟ್ ನೋಟಿಸ್ ನೀಡಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ʼಸಿದ್ದು ನಿಜಕನಸುಗಳು ಸಂಪುಟ 1ʼ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ್ ನಾರಾಯಣ್ ಪುಸ್ತಕವನ್ನು ಬಿಡುಗಡೆಗೊಳಿಸಬೇಕಿತ್ತು.

ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್ ಕೋರ್ಟ್ ಪುಸ್ತಕ ಬಿಡುಗಡೆಗೆ ತಡೆ ನೀಡಿದೆ.

ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ಸಮಾರಂಭವನ್ನು ಆಯೋಜಕರು ರದ್ದುಗೊಳಿಸಿದ್ದಾರೆ.