ತೆಲುಗಿನ ಆರ್ಆರ್ಆರ್ ಸಿನಿಮಾದ ನಾಟು ನಾಟು ಹಾಡಿಗೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ದೊರೆತಿದೆ.
ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಯ ಬೆಸ್ಟ್ ಒರಿಜನಲ್ ಸಾಂಗ್ ಕೆಟಗರಿಯಲ್ಲಿ ‘ನಾಟು ನಾಟು’ ಹಾಡಿಗೆ ಈ ಪ್ರಶಸ್ತಿ ಬಂದಿದ್ದು, ಯುನೈಟೆಡ್ ಸ್ಟೇಟ್ಸ್ ನ ಬೆವೆರ್ಲಿ ಹಿಲ್ಸ್ ನಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಈ ಗೌರವವನ್ನು ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಈ ಪ್ರಶಸ್ತಿಯನ್ನು ಪಡೆದರು.
ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಾಗಿ ಎರಡು ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿತ್ತು. ಇಂಗ್ಲಿಷ್ ಹೊರತಾದ ಸಿನಿಮಾಗಳಿಗೆ ನೀಡುವ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಹಾಗೂ ಅತ್ಯುತ್ತಮ ಗೀತೆ ವಿಭಾಗದಲ್ಲಿ ಸಿನಿಮಾ ನಾಮಿನೇಟ್ ಆಗಿತ್ತು. ಇದೀಗ ಪ್ರಶಸ್ತಿಯನ್ನು ಗೆದ್ದಿರುವುದು ರಾಜಮೌಳಿ, ಜೂ.ಎನ್ ಟಿ ಆರ್ ಮತ್ತು ರಾಮ್ ಚರಣ್ ಅಭಿಮಾನಿಗಳಿಗೆ ಸಂತಸ ತಂದಿದೆ.
1,200 ಕೋಟಿ ರೂ.ಗೂ ಅಧಿಕ ಗಳಿಕೆ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಭಾರತೀಯ ಚಿತ್ರರಂಗದ ಹಿರಿಮೆ ಹೆಚ್ಚಿಸಿದೆ.










