ಬೆಂಗಳೂರಿನಲ್ಲಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿದ ಅಪರಿಚಿತ…

60
firstsuddi

ಬೆಂಗಳೂರು : ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ಜಯನಗರದ ವಿಜಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿದ್ದಾನೆ.

ನಿನ್ನೆ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾಲೇಜಿನ ಲೇಡಿಸ್ ಟಾಯ್ಲೆಟ್ ಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ, ಒಳಗಿನಿಂದ ಲಾಕ್ ಹಾಕಿದ್ದಾನೆ. ಬಳಿಕ ಅಲ್ಲಿದ್ದ ವಿದ್ಯಾರ್ಥಿನಿಯರ ಕೈಹಿಡಿದು ಎಳೆದಿದ್ದಾನೆ. ಎಲ್ಲ ವಿದ್ಯಾರ್ಥಿನಿಯರು ಕೂಗಿಕೊಂಡಾಗ ಕಾಲೇಜಿನ ನಾಲ್ಕನೇ ಮಹಡಿಯ ಲೇಡಿಸ್ ಟಾಯ್ಲೆಟ್ ನಿಂದ ಎಸ್ಕೇಪ್ ಆಗಿದ್ದಾನೆ.

ಇಂದು ಬೆಳಗ್ಗೆ ಅಪರಿಚಿತನ ಕಿಡಿಗೇಡಿಯ ಕೃತ್ಯ ವಿರೋಧಿಸಿ ವಿಜಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಸ್ಥಳಕ್ಕೆ ಬಂದ ಜಯನಗರ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿದ್ದಾರೆ. ನಂತರ ಪ್ರತಿಭಟನೆಯನ್ನು ಕೈಬಿಟ್ಟರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಶೋಧಕಾರ್ಯ ಮುಂದುವರೆಸಿದ್ದಾರೆ.