ಕನ್ನಡದಲ್ಲಿ ಮಾತನಾಡಿದಕ್ಕೆ ಯುವತಿಗೆ ಕೇರಳ ಯುವತಿಯಿಂದ ಹಲ್ಲೆ…

51
firstsuddi

ಬೆಂಗಳೂರು: ಕನ್ನಡದಲ್ಲಿ ಮಾತನಾಡಿದಕ್ಕೆ ತಲೆಗೆ ರಕ್ತ ಹೆಪ್ಪುಗಟ್ಟುವಂತೆ ಕನ್ನಡದ ಯುವತಿಗೆ, ಕೇರಳದ ಯುವತಿ ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ನ ಪಿಜಿಯೊಂದರಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ.

ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿ ಸೃಷ್ಟಿ ಬಿಟಿಎಂ ಲೇಔಟ್ ನ ಪಿಜಿಯಲ್ಲಿದ್ರು. ಇವರಿಗೆ ಕೇರಳ ಮೂಲದ ಅಸ್ಸೇಲಾ ಎಂಬ ಯುವತಿ ರೂಂಮೇಟ್ ಆಗಿದ್ರು. ಮೊನ್ನೆ ಸೃಷ್ಟಿ ಫೋನಲ್ಲಿ ಕನ್ನಡ ಮಾತನಾಡ್ತಿರುವಾಗ, ನನಗೆ ಕನ್ನಡ ಅರ್ಥ ಆಗಲ್ಲ. ಇಂಗ್ಲೀಷ್ ನಲ್ಲೇ ಮಾತನಾಡು ಅಂತ ಕನ್ನಡ ಭಾಷೆಗೆ ಅವಮಾನಿಸಿ, ಧಮ್ಕಿ ಹಾಕಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸೃಷ್ಟಿ ತಲೆಗೆ ಬಲವಾಗಿ ಹೊಡೆದಿದ್ದಾರೆ.

ಹಲ್ಲೆ ಬಳಿಕ ಗುರುವಾರ ಮಧ್ಯಾಹ್ನ ವೈದ್ಯೆ ಆಸ್ಪತ್ರೆ ತೆರಳಿದ್ದು, ಪರೀಕ್ಷೆ ವೇಳೆ ತಲೆಗೆ ಪೆಟ್ಟಾಗಿರುವ ಬಗ್ಗೆ ವೈದ್ಯರು ವರದಿ ನೀಡಿದ್ದಾರೆ. 2 ವರ್ಷದಿಂದ ಒಟ್ಟಿಗೆ ವಾಸವಿರುವ ಇವರಿಬ್ಬರ ಮಧ್ಯೆ ಆಗಾಗ ಸಣ್ಣಪುಟ್ಟ ಮನಸ್ತಾಪ, ಗಲಾಟೆಗಳು ಭಾಷೆಯ ವಿಚಾರವಾಗಿ ನಡೆದಿತ್ತಂತೆ. ಆದರೆ ಮೊನ್ನೆ ಕನ್ನಡ ಭಾಷೆಯನ್ನ ತೀರಾ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಕನ್ನಡದಲ್ಲಿ ಮಾತನಾಡಿದಕ್ಕೆ ನನ್ನನ್ನು ಹೊಡೆದು, ಈ ರೀತಿ ಹಲ್ಲೆ ಮಾಡಿದ್ದಾಳೆ. ನನ್ನ ರೂಮ್​ಮೆಟ್ ಮಲೆಯಾಳಿ, ನನ್ನ ಕೂದಲು ಹಿಡಿದು ಹೊಡೆದು ಥಳಿಸಿದ್ದಾಳೆ ಅಂತ ವೈದ್ಯೆ ವಿಡಿಯೋದಲ್ಲಿ ತನ್ನ ಅಳಲು ತೋಡಿಕೊಂಡಿದ್ದಾರೆ. ಘಟನೆ ಸಂಬಂಧ ವೈದ್ಯೆ ಸೃಷ್ಟಿ ಅಸ್ಸೇಲಾ ವಿರುದ್ದ ಮೈಕೋಲೇಔಟ್ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ.

ವಿವಿಧ ಕನ್ನಡ ಪರ ಸಂಘಟನೆಗಳು, ಕರ್ನಾಟಕದ ಯುವತಿಗೆ ಹಲ್ಲೆ ಮಾಡಿದ ಯುವತಿಯ ಮೇಲೆ ಕ್ರಮಕ್ಕೆ ಆಗ್ರಹಿಸಿವೆ.