ಕೇಂದ್ರ ಸಚಿವರ ಬೆಂಗಾವಲು ವಾಹನ ಅಪಘಾತ…

62
firstsuddi

ಪಾಟ್ನಾ : ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರ ಬೆಂಗಾವಲು ವಾಹನ ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಪಲ್ಟಿಯಾದ ಬೆಂಗಾವಲು ವಾಹನವನ್ನು ಪರಿಶೀಲಿಸುತ್ತಿರುವ ವಿಡಿಯೋವನ್ನು ಸಚಿವ ಅಶ್ವಿನಿ ಚೌಬೆ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಕೊರಂಸಾರೈ ಪೊಲೀಸ್ ಠಾಣೆಯ ಕಾರು ಕಾರ್ಕೇಡ್ ನಲ್ಲಿನ ಮಥಿಲ-ನಾರಾಯಣಪುರ ರಸ್ತೆಯ ಸೇತುವೆಯ ಕಾಲುವೆಯಲ್ಲಿ ಬಿದ್ದು, ಅಪಘಾತಕ್ಕೀಡಾಗಿದೆ. ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ದುಮ್ರಾವ್ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೂ ಹೆಚ್ಚಿನ ಗಾಯಗಳಾಗಿದ್ದ ಇಬ್ಬರು ಪೊಲೀಸರನ್ನು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳಿಗೆ ಸ್ಥಳಾಂತರಿಸಲಾಗಿದೆ.