ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಗಿಫ್ಟ್ ಪಾಲಿಟಿಕ್ಸ್.

47
firstsuddi

ಬೆಳಗಾವಿ : ಜಿಲ್ಲೆಯ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಮುಂದುವರಿದಿದೆ.

ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ, ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ್ ಮನ್ನೋಳಕರ್ ಅವರು ಹಳದಿ, ಕುಂಕುಮ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಮಹಿಳೆಯರಿಗೆ ಸೀರೆ ಹಾಗೂ ಹಾಟ್ ಬಾಕ್ಸ್ ಗಿಫ್ಟ್ ನೀಡಿದ್ದಾರೆ.

ಸದ್ಯ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಿಫಿನ್ ಬಾಕ್ಸ್, ಮಿಕ್ಸರ್ ಗ್ರೈಂಡರ್ ಕೊಟ್ಟಿದ್ದಾಗಿದೆ. ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ತಟ್ಟೆ, ಲೋಟ ನೀಡಿದ್ದಾಗಿದೆ. ಇದೀಗ ನಾಗೇಶ್ ಮನ್ನೋಳಕರ್‌ರಿಂದ ಸೀರೆ ಹಾಗೂ ಹಾಟ್‌ಬಾಕ್ಸ್ ವಿತರಣೆ ಮಾಡಲಾಗುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಜ್ಜಾಗಿದ್ದು, ಚುನಾವಣೆಯಲ್ಲಿ ನೇರಾನೇರ ಹಣಾಹಣಿ ಕಾಣುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಕಮಲ ಅರಳಿಸಲೇಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಣತೊಟ್ಟು ಓಡಾಟ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷದಿಂದ ನಾಗೇಶ್ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತು ಪಡಿಸಿದರೆ ಸಂಜಯ್ ಪಾಟೀಲ್ ಹಾಗೂ ಧನಂಜಯ್ ಜಾಧವ್ ಅವರು ಟಿಕೆಟ್​ಗಾಗಿ ಪೈಪೋಟಿ ನಡೆಸಿದ್ದಾರೆ.