ಜಮ್ಮುವಿನಲ್ಲಿ ಅವಳಿ ಸ್ಫೋಟ ; 6 ಜನರಿಗೆ ಗಾಯ…

76
firstsuddi

ಶ್ರೀನಗರ : ಕಣಿವೆ ಪ್ರದೇಶ ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಗಿನ ಜಾವ ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ನಾಗರಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಜಮ್ಮು ಪೊಲೀಸ್ ಎಡಿಜಿ ಮುಖೇಶ್ ಸಿಂಗ್ ಕೂಡ ಈ ಘಟನೆಯನ್ನು ಖಚಿತಪಡಿಸಿದ್ದು, ಸ್ಫೋಟದ ಕುರಿತು ತನಿಖೆ ನಡೆಯುತ್ತಿದೆ. ಸ್ಫೋಟದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗಾಗಲೇ ಜಮ್ಮು ಕಾಶ್ಮೀರವನ್ನು ತಲುಪಿದೆ. ಈ ಹಿನ್ನೆಲೆಯಲ್ಲಿ ಈ ಯಾತ್ರೆಗೆ ಹೈಅಲರ್ಟ್ ಘೋಷಿಸಲಾಗಿದೆ.