ದೇಶದಲ್ಲಿ 89 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,104ಕ್ಕೆ ಏರಿಕೆ…

37
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,104ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,737ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,104 ಮಂದಿ ಸೋಂಕಿತರ ಪೈಕಿ ಈವರೆಗೆ 4,41,49,436 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.