ಖ್ಯಾತ ಕವಿ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ…

36
firstsuddi

ಬೆಂಗಳೂರು : ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್(82) ಅವರು ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ತಿರುಮಲೇಶ್ ಇಂದು ಮುಂಜಾನೆ ಹೈದರಾಬಾದ್ ನ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ತಿರುಮಲೇಶ್ ಅಗಲಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ತಿರುಮಲೇಶ್ ಇವರು 1975ರಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹೈದರಾಬಾದ್ ಗೆ ತೆರಳಿದ ತಿರುಮಲೇಶರು ಅಲ್ಲಿ ಭಾಷಾ ವಿಜ್ಞಾನದಲ್ಲಿ ಪಿಎಚ್ ಡಿ ಗಳಿಸಿದರು.

ಹೈದರಾಬಾದ್ ನ ಸೆಂಟ್ರಲ್ ಇನ್ಸ್ ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ತಮ್ಮ ಬಾಲ್ಯವನ್ನು (ಜ. 1940) ಕಾಸರಗೋಡಿನ ಕಾರಡ್ಕದಲ್ಲಿ ಮಲೆಯಾಳಿಗಳ ನಡುವೆ ಕಳೆದ ತಿರುಮಲೇಶ್ ಅವರು ತಮ್ಮ ಜೀವನದ ಬಹುತೇಕ ಅವಧಿಯನ್ನು ಕರ್ನಾಟಕದಿಂದ ಹೊರಗಡೆಯೇ ಇದ್ದು ಕಳೆದಿದ್ದಾರೆ.

ಕಾವ್ಯ, ಕತೆ, ಕಾದಂಬರಿ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಕೆಲಸ ಮಾಡಿರುವ ಕೆ.ವಿ. ತಿರುಮಲೇಶ್ ಸಾಹಿತ್ಯ ವಿಮರ್ಶೆ ಮತ್ತು ಭಾಷಾ ವಿಜ್ಞಾನ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ.