ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನ ಶಾಲಾ-ಕಾಲೇಜುಗಳಿಗೆ ರಜೆ…

47
firstsuddi

ಚೆನ್ನೈ: ತಮಿಳುನಾಡಿನಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಿಣಂನಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ, ಶ್ರೀಲಂಕಾ ಕರಾವಳಿಯಿಂದ 80 ಕಿ.ಮೀ ದೂರದಲ್ಲಿ ಮತ್ತು ತಮಿಳುನಾಡಿನ ಕಾರೈಕಲ್ ನಿಂದ 400 ಕಿ.ಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ನಲ್ಲಿ ತಿಳಿಸಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಇಂದು ದಕ್ಷಿಣ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ 1-2 ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇಂದು ಮತ್ತು ನಾಳೆ ಸಮುದ್ರದಲ್ಲಿ ಬಿರುಗಾಳಿ ಹೆಚ್ಚಾಗಲಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.