ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಡಿ ಪ್ರಕರಣದ ತನಿಖೆಗೆ ಮನವಿ…

59
firstsuddi

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಈಗ ದೆಹಲಿ ಅಂಗಳ ತಲುಪಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.

ನಿನ್ನೆ ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ತಡರಾತ್ರಿ ಅಮಿತ್ ಶಾರನ್ನು ಭೇಟಿಯಾಗಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸಿಡಿ ಪ್ರಕರಣ ಸಂಬಂಧ ತಮ್ಮಲ್ಲಿರುವ ದಾಖಲೆಗಳು, ಸಾಕ್ಷ್ಯಾಧಾರಗಳ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಮಿತ್ ಶಾ ಕಾನೂನು ಸಂಗತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್ ಶಾ ಭೇಟಿಗೂ ಮುನ್ನ ರಮೇಶ್ ಜಾರಕಿಹೊಳಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದರು. ಎಲ್ಲಾ ಅಗತ್ಯ ದಾಖಲೆಗಳಿದ್ದು ಈ ಬಗ್ಗೆ ಕ್ರಮ ಆದಲ್ಲಿ ದೊಡ್ಡ ರಾಜಕೀಯ ಲಾಭವಾಗಲಿದೆ ಎಂದು ಅವರಿಗೆ ವಿವರಿಸಿದ್ದರು.