ರಾಯಚೂರು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ.
ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ (17) ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನೇ ಕೊಲೆ ಮಾಡಿ ನೇಣಿಗೆ ಹಾಕಿದ್ದಾರೆ ಎಂದು ಆರೋಪಿಸಿ ಮೃತ ವಿದ್ಯಾರ್ಥಿನಿ ಸಂಬಂಧಿಕರು ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿನ್ಸಿಪಾಲ್ ವಿದ್ಯಾರ್ಥಿನಿಗೆ ಆಗಾಗ ಲೈಂಗಿಕ ಕಿರುಕುಳ ನೀಡುತ್ತಿದ್ದ. 2023 ಫೆಬ್ರವರಿ 3 ರಂದು ಪ್ರಿನ್ಸಿಪಾಲ್ ವಿದ್ಯಾರ್ಥಿನಿಯನ್ನು ತನ್ನ ಕೊಠಡಿಗೆ ಕರೆದು ಅತ್ಯಾಚಾರ ಮಾಡಿ, ನೇಣು ಹಾಕಿ ಕೊಲೆ ಮಾಡಿದ್ದಾರೆ ಎಂದು ಮೃತ ವಿದ್ಯಾರ್ಥಿನಿಯ ಚಿಕ್ಕಪ್ಪ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ.










